ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ವಾರಾಂತ್ಯದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಕಂಡಿದೆ. ಗ್ರಾಮ್ಗೆ 4ರಿಂದ 6ರೂವರೆಗೆ ಬೆಲೆ ಇಳಿದಿದೆ. ಆಭರಣ ಚಿನ್ನದ ಬೆಲೆ 5 ರೂ ಇಳಿಕೆ ಕಂಡಿದೆ.
9,235 ರೂ ಇದ್ದ ಸ್ವರ್ಣ ಬೆಲೆ ಈಗ 9,230 ರೂಗೆ ತಗ್ಗಿದೆ. ಬೆಳ್ಳಿ ಬೆಲೆಯಲ್ಲೂ ಹೆಚ್ಚಿನ ವ್ಯತ್ಯಯವಾಗಿಲ್ಲ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,300 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,690 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,300 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,000 ರೂಪಾಯಿಯಲ್ಲಿ ಇದೆ.