February 4, 2026
Wednesday, February 4, 2026
spot_img

ಆರನ್ ಜಾರ್ಜ್​ ಶತಕದಾಟ, ಅಂಡರ್-19 ಏಕದಿನ ವಿಶ್ವಕಪ್‌ ಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ ಗೆದ್ದು ಫೈನಲ್​ಗೇರಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ ಇಬ್ಬರ ಶತಕದ ನೆರವಿನಿಂದ 310 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ಇನ್ನು 53 ಎಸೆತಗಳು ಬಾಕಿ ಇರುವಂತೆಯೇ ಗೆಲುವು ದಾಖಲಿಸಿದೆ.

ಭಾರತ ಪರ ಆರಂಭಿಕ ವೈಭವ್ ಸೂರ್ಯವಂಶಿ 33 ಎಸೆತಗಳಲ್ಲಿ 68 ರನ್ ಬಾರಿಸಿದರು. ನಾಯಕ ಆಯುಷ್ ಮ್ಹಾತ್ರೆ 59 ಎಸೆತಗಳಲ್ಲಿ 62 ರನ್​ ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು.

ಮತ್ತೊಂದೆಡೆ ರಂಭಿಕ ಆಟಗಾರ ಆರನ್ ಜಾರ್ಜ್ ಅದ್ಭುತ ಬ್ಯಾಟಿಂಗ್ ನಡೆಸಿ , ಆ 104 ಎಸೆತಗಳಲ್ಲಿ 115 ರನ್ ಬಾರಿಸಿ ಭಾರತದ ಗೆಲುವಿಗೆ ದೊಡ್ಡ ಊಡುಗೆರೆ ನೀಡಿದರು.

ವಿಹಾನ್ ಮಲ್ಹೋತ್ರಾ ಕೂಡ ಕೊನೆಯಲ್ಲಿ ಉತ್ತಮ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ ಭಾರತ 41.1 ಓವರ್‌ಗಳಲ್ಲಿ ಮೂರು ವಿಕೆಟ್‌ಗಳ ನಷ್ಟಕ್ಕೆ ಗೆಲುವಿನ ದಡ ಸೇರಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !