ಹೊಸದಿಗಂತ ವರದಿ, ಮುಂಡಗೋಡ:
ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಗೂಡ್ಸ್ ವಾಹನದ ಮೇಲೆ ವಿದ್ಯುತ್ ಕಂಬವೊಂದು ಬಿದ್ದು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಬೆಡಸಗಾಂವದಲ್ಲಿ ಬುಧವಾರ ನಡೆದಿದೆ.
ಬೆಡಸಗಾಂವ ಭಾಗದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಗೂಡ್ಸ್ ವಾಹನದ ಮೇಲೆ ಬಿದ್ದ ವಿದ್ಯುತ್ ಕಂಬ ಸುರಿಯುತ್ತಿರುವುದರಿಂದ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಇದರಿಂದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಗೂಡ್ಸ್ ವಾಹನದಲ್ಲಿ ತಾಲೂಕಿನ ರಾಮಾಪುರದಿಂದ ಹುಲೆಕಲ್ ಗೆ ಕಾರ್ಮಿಕರನ್ನು ಕರೆದುಕೊಂಡು ಬೆಡಸಗಾಂವ ಮಾರ್ಗವಾಗಿ ತೆರಳುತ್ತಿದ್ದರು. ಅದೃಷ್ಟವಶಾತ್ ವಾಹನದಲ್ಲಿದ್ದ ಕಾರ್ಮಿಕರು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಡಗೋಡ:ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಗೂಡ್ಸ್ ವಾಹನದ ಮೇಲೆ ವಿದ್ಯುತ್ ಕಂಬವೊಂದು ಬಿದ್ದು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಬೆಡಸಗಾಂವದಲ್ಲಿ ಬುಧವಾರ ನಡೆದಿದೆ.
ಬೆಡಸಗಾಂವ ಭಾಗದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಗೂಡ್ಸ್ ವಾಹನದ ಮೇಲೆ ಬಿದ್ದ ವಿದ್ಯುತ್ ಕಂಬ ಸುರಿಯುತ್ತಿರುವುದರಿಂದ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಇದರಿಂದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಗೂಡ್ಸ್ ವಾಹನದಲ್ಲಿ ತಾಲೂಕಿನ ರಾಮಾಪುರದಿಂದ ಹುಲೆಕಲ್ ಗೆ ಕಾರ್ಮಿಕರನ್ನು ಕರೆದುಕೊಂಡು ಬೆಡಸಗಾಂವ ಮಾರ್ಗವಾಗಿ ತೆರಳುತ್ತಿದ್ದರು. ಅದೃಷ್ಟವಶಾತ್ ವಾಹನದಲ್ಲಿದ್ದ ಕಾರ್ಮಿಕರು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.