ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಕುಲುವಿನ ಸೈನ್ಜ್ ಕಣಿವೆಯಲ್ಲಿ ಮೇಘಸ್ಫೋಟ ಸಂಭವಿಸಿದೆ.
ಭಾರೀ ಪ್ರವಾಹದಿಂದಾಗಿ ಪಾರ್ವತಿ ನದಿಯೂ ಉಕ್ಕಿ ಹರಿಯುತ್ತಿದೆ.ಈ ಬೆನ್ನಲ್ಲೇ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ಸದ್ಯಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿ ಪಾಸ್ತಿ ನಷ್ಟ ಸಂಭವಿಸಿಲ್ಲ. ಪ್ರವಾಹ ಸೃಷ್ಟಿಯಾಗುತ್ತಿದ್ದಂತೆ ರಕ್ಷಣಾ ತಂಡಗಳನ್ನು ಕಾರ್ಯಕ್ಕೆ ಅಣಿಗೊಳಿಸಲಾಗುತ್ತಿದೆ. ಜೊತೆಗೆ ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.