ಜಮ್ಮು -ಕಾಶ್ಮೀರದಲ್ಲಿ ಜಂಟಿ ಕಾರ್ಯಾಚರಣೆ: ಓರ್ವ ಭಯೋತ್ಪಾದಕ ಎನ್‌ಕೌಂಟರ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್;

ಜಮ್ಮು ಮತ್ತು ಕಾಶ್ಮೀರದ ಬಸಂತ್‌ಗಢದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದ್ದು, ಓರ್ವ ಭಯೋತ್ಪಾದಕನನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಜೆಎಂಯುಕೆಎಂಆರ್‌ ಪೋಲಿಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಇಲ್ಲಿಯವರೆಗೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ಎನ್‌ಕೌಂಟರ್ ಬೆಳಿಗ್ಗೆ ಬೇಗನೆ ಪ್ರಾರಂಭವಾಯಿತು, ಮತ್ತು ಕಾರ್ಯಾಚರಣೆ ಮುಂದುವರೆದಿದೆ ಎಂದು ಬಸಂತ್‌ಗಢದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮ್ಮು ವಲಯದ ಐಜಿಪಿ ಭೀಮ್ ಸೇನ್ ಟುಟಿ ಹೇಳಿದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!