February 5, 2026
Thursday, February 5, 2026
spot_img

ಟಿ20 ವಿಶ್ವಕಪ್ | ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಟೀಂ ಇಂಡಿಯಾ, ನವಿ ಮುಂಬೈನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 30 ರನ್‌ಗಳಿಂದ ಮಣಿಸಿ ಬಲಿಷ್ಠ ಸಂದೇಶ ರವಾನಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನದ ಪ್ರದರ್ಶನ ನೀಡಿದ ಭಾರತ, ಟೂರ್ನಿಗೆ ಮುನ್ನ ಉತ್ತಮ ಲಯ ಕಂಡುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 241 ರನ್‌ಗಳ ಭರ್ಜರಿ ಮೊತ್ತ ಕಲೆಹಾಕಿತು. ಆರಂಭಿಕರಾಗಿ ಇಳಿದ ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು. ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಗಮನ ಸೆಳೆದರೆ, ಅಭಿಷೇಕ್ ವೇಗದ 24 ರನ್ ಸೇರಿಸಿದರು.

ಇದನ್ನೂ ಓದಿ:

ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 45 ರನ್‌, ಸೂರ್ಯಕುಮಾರ್ ಯಾದವ್ 30 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಅಕ್ಷರ್ 35 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು.

241 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತು. ರಿಯಾನ್ ರಿಕಲ್ಟನ್ 44 ರನ್‌, ಟ್ರಿಸ್ಟಾನ್ ಸ್ಟಬ್ಸ್ ಅಜೇಯ 45 ರನ್‌ಗಳೊಂದಿಗೆ ಹೋರಾಟ ನೀಡಿದರೂ ಗುರಿ ತಲುಪಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆಫ್ರಿಕಾ 210 ರನ್‌ಗಳಿಗೆ ಸೀಮಿತವಾಯಿತು.

ಭಾರತದ ಪರ ಅಭಿಷೇಕ್ ಶರ್ಮಾ ಎರಡು ವಿಕೆಟ್ ಪಡೆದರೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಶಿವಂ ದುಬೆ ಹಾಗೂ ಅರ್ಷದೀಪ್ ಸಿಂಗ್ ತಲಾ ಒಂದು ವಿಕೆಟ್ ಕಬಳಿಸಿದರು. ಅಭ್ಯಾಸ ಪಂದ್ಯದಲ್ಲೇ ಭಾರತ ಸಮಗ್ರ ಪ್ರದರ್ಶನ ನೀಡಿದ್ದು, ವಿಶ್ವಕಪ್‌ಗೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !