ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಎಲ್ಲೆಲ್ಲಿ ರೆಡ್ ಅಲರ್ಟ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ವಿರಾಜಪೇಟೆ, ಕೊಟ್ಟಿಗೆಹಾರ, ಶೃಂಗೇರಿ, ಹುಂಚದಕಟ್ಟೆ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್​ರಾಕ್, ಖಾನಾಪುರ, ಕೊಪ್ಪ, ಸೋಮವಾರಪೇಟೆ, ಪೊನ್ನಂಪೇಟೆ, ಸಿದ್ದಾಫುರ, ಕದ್ರಾ, ಬನವಾಸಿಯಲ್ಲಿ ಭಾರಿ ಮಳೆಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!