ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ 21,799 ಪ್ರಕರಣಗಳು ಹೈಕೋರ್ಟ್ ನಲ್ಲಿ ಬಾಕಿಯಿದ್ದು, 5,016 ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ,ಇದನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ. ಸರ್ಕಾರದ ವಿರುದ್ಧದ ತಡೆಯಾಜ್ಞೆ ಪ್ರಕರಣಗಳನ್ನು ಆದಷ್ಟು ಬೇಗನೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಹ ಸರ್ಕಾರಕ್ಕೆ ಮುಜುಗುರವಾಗುವಂತಹ ಬೆಳವಣಿಗೆಗಳು ಆಗಿವೆ. ತಪ್ಪುಗಳಿಂದ ಸರ್ಕಾರಕ್ಕೆ ಮುಜುಗರವುಂಟಾಗುವ ಪರಿಸ್ಥಿತಿ ಬರಬಾರದು. ಹಾಗಾಗಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇದಕ್ಕೆ ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.