ಮೂರನೇ ಪತ್ನಿಯನ್ನು ಮರ್ಡರ್‌ ಮಾಡಿ ಡೆಡ್‌ಬಾಡಿಯನ್ನು ಬಸ್‌ನಲ್ಲಿ ಕಳಿಸಿದ್ದ ಅಜ್ಜ ಅರೆಸ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಳಿ ವಯಸ್ಸಿನಲ್ಲಿ ತನ್ನ ಮೂರನೇ ಹೆಂಡತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಲಗೇಜ್ ಎಂದು ಬಸ್ಸಿನಲ್ಲಿ ಕಳುಹಿಸಿದ್ದ ಅಜ್ಜ ಕಡೆಗೂ ಅರೆಸ್ಟ್‌ ಆಗಿದ್ದಾರೆ.

ಕೃತ್ಯ ಎಸಗಿ ಮೂರು ವರ್ಷಗಳ ಬಳಿಕ ರಾಯಚೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಹಂತಕನ ಜಾಡು ಹಿಡಿದು ಶೋಧ ನಡೆಸಿದ ಪೊಲೀಸರು, ಕೊನೆಗೂ ಆತನನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಆರೋಪಿ 75 ವರ್ಷದ ಹುಸೇನಪ್ಪನನ್ನು ಬಂಧಿಸಲಾಗಿದೆ.

ಪ್ರಾಥಮಿಕ ಆರೋಗ್ಯ ‌ಕೇಂದ್ರದಲ್ಲಿ ಕಿರಿಯ ಸಹಾಯಕ ಅಧಿಕಾರಿಯಾಗಿದ್ದ ಹುಸೇನಪ್ಪನ ಮೊದಲ ಪತ್ನಿ ತೀರಿಕೊಂಡಿದ್ದರು. ಅದಾದ ನಂತರ ಆತ, ಎರಡನೇ ವಿವಾಹವಾಗಿದ್ದ. ಆಕೆ ಜಗಳವಾಡಿ ಪತಿಯನ್ನು ತೊರೆದು ಹೋಗಿದ್ದಳು. ನಂತರ, ಸರ್ಕಾರಿ ನೌಕರ ಎಂದು ಹೇಳಿಕೊಂಡು ಕೊಪ್ಪಳ ‌ತಾಲೂಕಿನ‌ ಇಂದರಗಿ ನಿವಾಸಿ ರೇಣುಕಮ್ಮರನ್ನು ಮೂರನೇ ಮದುವೆಯಾಗಿದ್ದ. ಮದುವೆಯಾದ ಬಳಿಕ ಗಂಗಾವತಿಯ‌ ಲಕ್ಷ್ಮೀ ಕ್ಯಾಂಪ್‌ನಲ್ಲಿ ಪತ್ನಿ ಜೊತೆ ವಾಸ ಮಾಡತಿದ್ದ.

2022 ರಲ್ಲಿ ಹೆಂಡತಿಯನ್ನು ಕೊಚ್ಚಿ‌ ಕೊಲೆ ಮಾಡಿದ್ದ ಹುಸೇನಪ್ಪ, ಶವವನ್ನು ಲಗೇಜ್ ಎಂದು‌ ಕಂಪ್ಲಿ ಬಸ್​ನಲ್ಲಿ ಕಳುಹಿಸಿದ್ದ. ಆ ಬಳಿಕ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ನಂತರ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ, ಆರೋಪಿಯನ್ನು ಪತ್ತೆಹೆಚ್ಚಿ ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!