ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಧಾರವಾಡದಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ತೆರಳುತ್ತಿತ್ತು. ಈ ವೇಳೆ, ಟ್ರೈನ್‌ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಗೇಟ್ ಮ್ಯಾನ್ ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ರೈಲನ್ನು ದಾವಣಗೆರೆಯಲ್ಲಿ ನಿಲ್ಲಿಸಿದ್ದಾರೆ. ಪ್ರಯಾಣಿಕರು ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.
ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಾವಿರಾರು ಜನರ ಪ್ರಾಣ ಉಳಿದಿದೆ.