September 27, 2026
Sunday, September 27, 2026
spot_img

ಯಾರು ಏನೇ ಹೇಳಿದ್ರೂ ನಮ್ಮ ನಿರ್ಧಾರ ಬದಲಾಗಲ್ಲ, ಭಾರತದ ವಿರುದ್ಧ ಆಡೋದಿಲ್ಲ: ಶೆಹಬಾಜ್ ಷರೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸ್ಪಷ್ಟಪಡಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಪಾಕಿಸ್ತಾನದ ನಿಲುವು ಬದಲಾಗಿಲ್ಲ ಎಂದು ಪುನರುಚ್ಚರಿಸಿದರು.

ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಕುರಿತು ಎಲ್ಲ ಆಯಾಮಗಳಿಂದ ಚರ್ಚೆ ನಡೆಸಿದ ಬಳಿಕವೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕ್ರೀಡೆ ರಾಜಕೀಯದಿಂದ ದೂರ ಇರಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರೂ, ಈ ನಿರ್ಧಾರ ಸೂಕ್ತವೆಂಬ ನಂಬಿಕೆ ಸರ್ಕಾರಕ್ಕೆ ಇದೆ ಎಂದರು. ಯಾವುದೇ ಆತುರ ಅಥವಾ ಒತ್ತಡಕ್ಕೆ ಒಳಗಾಗಿ ಈ ತೀರ್ಮಾನ ಕೈಗೊಂಡಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ:

ಈ ಬೆಳವಣಿಗೆಯ ನಂತರ ಪಾಕಿಸ್ತಾನ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಸಿತ್ತು. ನಂತರ ನೀಡಿದ ಸ್ಪಷ್ಟನೆಯಲ್ಲಿ, ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತದೆ, ಆದರೆ ಭಾರತ ವಿರುದ್ಧದ ಲೀಗ್ ಹಂತದ ಪಂದ್ಯವನ್ನು ಆಡದು ಎಂದು ತಿಳಿಸಿತ್ತು. ಇದೀಗ ಪ್ರಧಾನಿ ಶೆಹಬಾಜ್ ಷರೀಫ್ ಅವರ ಹೇಳಿಕೆಯಿಂದ ಆ ನಿರ್ಧಾರಕ್ಕೆ ಅಧಿಕೃತ ಮುದ್ರೆ ಬಿದ್ದಿದೆ.

Must Read