ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರೆದಿದೆ. ಇಂದು ಹೃದಯಾಘಾತದಿಂದ ಮತ್ತೋರ್ವ ವ್ಯಕ್ತಿಯ ಸಾವು ಸಂಭವಿಸಿದೆ. ಆಟೋ ಚಾಲಕನಿಗೆ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ ಆಟೋ ಚಾಲಕ. ಹಾಸನದ ಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ.
ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಇದೇ ರೀತಿಯ 16 ಸಾವುಗಳು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.