ಮೈಸೂರು ದಸರಾ: ಜನಸಂದಣಿ ನಿರ್ವಹಣೆ, ಭದ್ರತೆಗೆ ಹೆಚ್ಚಿನ ಒತ್ತು ನೀಡಿ.. ಸಿಎಂ ಸಿದ್ದು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವಿಖ್ಯಾತ ಮೈಸೂರು ದಸರಾವನ್ನು ಪ್ರತಿ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ದಸರಾ ಉತ್ಸವ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ದಸರಾ ಉತ್ಸವ ಸಂದರ್ಭದಲ್ಲಿ ನೂಕು ನುಗ್ಗಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಿದರು.

ಮೈಸೂರು ದಸರಾ ಉತ್ಸವ ವೀಕ್ಷಿಸಲು ವಿದೇಶಿಗರು ಸೇರಿದಂತೆ 10 ಲಕ್ಷಕ್ಕೂ ಹೆಚ್ಚು ಮಂದಿ ಬರುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!