ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ನಂದಿಗಿರಿಧಾಮದಲ್ಲಿ ಜುಲೈ 2ರಂದು ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ನಂದಿ ಗಿರಿಧಾಮ, ಸ್ಕಂದಗಿರಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೂನ್ 30ರ ಬೆಳಿಗ್ಗೆ 6 ರಿಂದ ಜುಲೈ 3ರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಜುಲೈ ಎರಡರಂದು ಸಚಿವ ಸಂಪುಟ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಬಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.