ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟಿ ಶೆಫಾಲಿ ಜರಿವಾಲಾ ಸಾವು ಅನುಮಾನಾಸ್ಪದ ವಾಗಿದೆಯೇ ಎನ್ನುವ ಶಂಕೆ ಇದೀಗ ವ್ಯಕ್ತವಾಗಿದೆ.
ಶೆಫಾಲಿ ಜರಿವಾಲಾ ಅವರ ಸಾವಿನ ಬಳಿಕ ಅವರ ನಿವಾಸಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಅಲ್ಲಿ ಅವರು ವ್ಯಾಪಕ ಶೋಧ ನಡೆಸಿದ್ದಾರೆ. ನಟಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದರೂ ಮುಂಬೈ ಪೊಲೀಸರು ನಟಿಯ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಐಕಾನಿಕ್ ಮ್ಯೂಸಿಕ್ ವಿಡಿಯೋ ಕಾಂಟಾ ಲಗಾ ಹಾಡಿನ ಮೂಲಕ ಎಲ್ಲರ ಮನಗೆದ್ದಿದ್ದ ಶೆಫಾಲಿ ಜರಿವಾಲಾ 42ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಮುಂಬೈನಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರ ಸಾವಿನ ಬಳಿಕ ಅವರ ನಿವಾಸಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಅಲ್ಲಿ ಅವರು ವ್ಯಾಪಕ ಶೋಧ ನಡೆಸಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿರುವ ಮುಂಬೈ ಪೊಲೀಸರು ಅವರ ಸಾವಿಗೆ ಕಾರಣವಾದ ಘಟನೆಗಳ ಬಗ್ಗೆ ಮನೆಯ ಅಡುಗೆಯವರು ಮತ್ತು ಮನೆಕೆಲಸದವರನ್ನು ಪ್ರಶ್ನಿಸಿದ್ದಾರೆ.
ಪುನೀತ್ ರಾಜ್ಕುಮಾರ್ ಜೊತೆ ಹುಡುಗರು ಚಿತ್ರದಲ್ಲಿ ‘ನಾ ಬೋರ್ಡು ಇರದ ಬಸ್ಸನು’ ಹಾಡಿಗೆ ಶೆಫಾಲಿ ಮಸ್ತ್ ಆಗಿ ಕುಣಿದಿದ್ದರು. 1982ರ ಡಿಸೆಂಬರ್ 15ರಂದು ಜನಿಸಿದ ಶೆಫಾಲಿ ಮುಂಬೈನಲ್ಲಿ ಬೆಳೆದರು. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ಶೆಫಾಲಿ ವಿವಾಹವಾದರು. ಆ ಬಳಿಕ 2009ರಲ್ಲಿ ಪತಿಯೊಂದಿಗೆ ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಎರಡನೇ ಮದುವೆಯಾದರು.