ಹೊಸ ದಿಗಂತ ಡಿಜಿಟಲ್ ಡೆಸ್ಕ್:
2025-27ರ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಅಂಕಪಟ್ಟಿ (WTC Points Table)ಯಲ್ಲಿ ಆಸ್ಟ್ರೇಲಿಯಾ ತಂಡ ಅಗ್ರ ಸ್ಥಾನಕ್ಕೇರಿದೆ .
ವೆಸ್ಟ್ ಇಂಡೀಸ್ ವಿರುದ್ಧ ಬಾರ್ಬಡೋಸ್ನಲ್ಲಿ ಶನಿವಾರ ಅಂತ್ಯವಾದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 159 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಮೂಲಕ ಆಸ್ಟ್ರೇಲಿಯಾ ತಂಡ ಅಗ್ರ ಸ್ಥಾನಕ್ಕೇರಿದರೆ, ಬಾಂಗ್ಲಾದೇಶ ವಿರುದ್ಧ ಇನಿಂಗ್ಸ್ ಹಾಗೂ 78 ರನ್ಗಳ ಭಾರೀ ಅಂತರದ ಗೆಲುವು ಸಾಧಿಸಿದ ಶ್ರೀಲಂಕಾ ಮೂರನೇ ಸ್ಥಾನಕ್ಕೇರಿದೆ. ಭಾರತ ತಂಡದ ವಿರುದ್ಧ ಲೀಡ್ಸ್ನಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದಿದ್ದ ಇಂಗ್ಲೆಂಡ್ ತಂಡ ಎರಡನೇ ಸ್ಥಾನದಲ್ಲಿದ್ದರೆ, ಭಾರತ ತಂಡ ಐದನೇ ಸ್ಥಾನಕ್ಕೆ ಕುಸಿದಿದೆ.
ಉಳಿದಂತೆ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಈ ಆವೃತ್ತಿಯಲ್ಲಿ ಇದುವರೆಗೆ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿಲ್ಲ. ಇನ್ನು ದಕ್ಷಿಣ ಆಫ್ರಿಕಾ ತಂಡವು ಪ್ರಸ್ತುತ ಜಿಂಬಾಬ್ವೆ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ಈ ಪಂದ್ಯದ ಫಲಿತಾಂಶದ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆಯಾಗಲಿದೆ.