ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾ ಕಾನೂನು ವಿದ್ಯಾರ್ಥಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು, ಕಾನೂನು ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ಜೂನ್ 25 ರಂದು ಇಲ್ಲಿನ ಕಸ್ಬಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ಮತ್ತು ಕಾಲೇಜಿನ ಮಾಜಿ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಿದ ಆರೋಪ ಮಾಡಲಾಗಿದೆ. ಸಮಯ ಮುಗಿದರೂ ತನ್ನನ್ನು ಕಾಲೇಜಿನಲ್ಲೇ ಉಳಿದುಕೊಳ್ಳಲು ಹೇಳಿ, ತನ್ನ ಸೀನಿಯರ್ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಲಾಯಿತು ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.
ತನ್ನ ಮೇಲೆ ಪೈಶಾಚಿಕ ಕೃತ್ಯ ನಡೆಸಿದ್ದನ್ನು ಆರೋಪಿಗಳು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು. ಈ ವಿಷಯ ಬಹಿರಂಗಪಡಿಸಿದರೆ, ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆದಾಗ್ಯೂ ನಾನು ಧೈರ್ಯ ಮಾಡಿ ದೂರು ನೀಡಿದೆ ಎಂದು ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೋಲ್ಕತ್ತಾ ಪೊಲೀಸ್ ಪ್ರಧಾನ ಕಚೇರಿ ಲಾಲ್‌ಬಜಾರ್ ಮೂಲಗಳ ಪ್ರಕಾರ, ಸಂತ್ರಸ್ತ ವಿದ್ಯಾರ್ಥಿನಿ ಆರೋಪ ಪಟ್ಟಿಯಲ್ಲಿ ಕಾಲೇಜಿನ ಭದ್ರತಾ ಸಿಬ್ಬಂದಿಯ ಹೆಸರನ್ನು ಉಲ್ಲೇಖಿಸಿದ್ದಾಳೆ. .
ಈ ಬಗ್ಗೆ ತನಿಖಾಧಿಕಾರಿಗಳು ಭದ್ರತಾ ಸಿಬ್ಬಂದಿಯನ್ನು ವಿಚಾರಣೆ ನಡೆಸಿದಾಗ ಆತನಿಂದ ಸಮಂಜಸ ಉತ್ತರ ಸಿಕ್ಕಿಲ್ಲ. ಹೀಗಾಗಿ ಆತನನ್ನು ವಶಕ್ಕೆ ಪಡೆದಿದ್ದಾರೆ.