ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್‌ನಲ್ಲಿ ಸುಟ್ಟ ವಾಸನೆ: ಮುಂಬೈಗೆ ಯು ಟರ್ನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನಿಂದ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್‌ನಲ್ಲಿ ಸುಟ್ಟಿದ್ದ ವಾಸನೆ ಬಂದಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಮುಂಬೈ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಗಿದೆ.

ವಿಮಾನವು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಪ್ರಯಾಣಿಕರನ್ನು ಬೇರೆ ವಿಮಾನಕ್ಕೆ ವರ್ಗಾಯಿಸಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದ ಉಂಟಾದ ಅನಾನುಕೂಲತೆಯನ್ನು ಕಡಿಮೆ ಮಾಡಲು ಮುಂಬೈನಲ್ಲಿರುವ ನಮ್ಮ ಸಿಬ್ಬಂದಿಗಳು ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡಿದರು ಎಂದು ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನವು AI 639 ರಾತ್ರಿ 11.50 ಕ್ಕೆ ಮುಂಬೈನಿಂದ ಹೊರಟಿದೆ ಮತ್ತು ಸುಮಾರು 45 ನಿಮಿಷಗಳ ಹಾರಾಟದ ಬಳಿಕ ವಿಮಾನದ ಕ್ಯಾಬಿನ್‌ನಲ್ಲಿ ಸುಟ್ಟಿರುವ ವಾಸನೆ ಕಾಣಿಸಿಕೊಂಡಿದೆ. ನಂತರ ಆ ಕೂಡಲೇ ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನವನ್ನು ಮುಂಬೈಗೆ ತಿರುಗಿಸಲಾಗುತ್ತದೆ ಎಂದು ಕ್ಯಾಪ್ಟನ್‌ ಹೇಳಿದ್ದಾರೆ ಎಂದು ಪ್ರಯಾಣಿಕರೊಬ್ಬರು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!