ಕಬಿನಿ ಜಲಾಶಯದ ಒಳ ಹರಿವು ಹೆಚ್ಚಳ.. ನದಿಗೆ ನೀರು ಬಿಡುಗಡೆ, ಭತ್ತದ ಬೆಳೆ ಸಂಪೂರ್ಣ ಮುಳುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಬಿನಿ ಜಲಾಶಯದ ಒಳ ಹರಿವು ಹೆಚ್ಚಾದ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಿರುವ ಪರಿಣಾಮ ಭತ್ತದ ಬೆಳೆ ಸಂಪೂರ್ಣ ಮುಳುಗಡೆಯಾಗಿದೆ.

ವಯನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾದ ಪರಿಣಾಮ ಹೆಚ್‌ಡಿ ಕೋಟೆಯ ಬೀಚನಹಳ್ಳಿಯಲ್ಲಿನ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದ್ದು, ಭತ್ತದ ಬೆಳೆ ನಾಶವಾಗಿದೆ.

ಬೊಕ್ಕಹಳ್ಳಿ ಹದಿನಾರು ಮೂಡಹಳ್ಳಿ, ಅಲತ್ತೂರು, ನಗರ್ಲೆ, ಕುಪ್ಪರವಳ್ಳಿ, ಹೊಸಕೋಟೆ, ಸುತ್ತೂರು, ಬೀಳುಗಲಿ, ತಾಯೂರು, ಹಾರೋಪುರ ಗ್ರಾಮಗಳಲ್ಲಿ ಬೆಳೆ ನಾಶ ಉಂಟಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!