ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ ವಿಪಕ್ಷಗಳ ಹೇಳಿಕೆಗಳಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದು, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಯಾರಿಗೂ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನೇ ನಿರ್ಧಾರ ಮಾಡುವುದಾದರೂ ಹೈಕಮಾಂಡ್ ತೀರ್ಮಾನ ಮಾಡೇ ಮಾಡುತ್ತದೆ ಎಂಬ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಏನು ನಿರ್ಧರಿಸುತ್ತದೆ ಅನ್ನೋದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಪಕ್ಷದ ಹೈಕಮಾಂಡ್ ಕೈಯಲ್ಲಿದೆ. ಅದು ಹೈಕಮಾಂಡ್‌ಗೆ ಬಿಟ್ಟಿದ್ದು. ಮುಂದಿನ ಕ್ರಮ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್‌ಗೆ ಇದೆ. ಆದರೆ ಯಾರೂ ಅನಗತ್ಯವಾಗಿ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.