ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಬಿಗ್ ಬಾಸ್ ಶೋ 11 ಸೀಸನ್ ನಲ್ಲಿ ಇದು ನನ್ನ ಕೊನೆ ಶೋ ಮುಂದಿನ ಸೀಸನ್ ಹೋಸ್ಟ್ ಮಾಡಲ್ಲ ಎಂದಿದ್ದ ನಟ ಕಿಚ್ಚ ಸುದೀಪ್ ಅವರು ಇದೀಗ ತನ್ನ ನಿರ್ಧಾರ ಬದಲಾಯಿಸಿದ್ದು, ಮತ್ತೆ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡಲು ಒಪ್ಪಿಕೊಂಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ ಕೂಡ ಕಿಚ್ಚ ಸುದೀಪ್ ಅವರ ನಿರೂಪಣೆಯಲ್ಲೇ ಮುಂದುವರಿಯಲಿದೆ. ಈ ಕುರಿತು ‘ಕಲರ್ಸ್ ಕನ್ನಡ’ ವಾಹಿನಿ ಘೋಷಣೆ ಮಾಡಿದೆ.
ಕಲರ್ಸ್ ಕನ್ನಡ ಹಾಗೂ ಅದರ ಆಯೋಜಕರು ಇಂದು ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಇದರಲ್ಲಿ ಕಿಚ್ಚ ಸುದೀಪ್ ಹಾಜರಾಗಿದ್ದಾರೆ. ಈ ಮೂಲಕ ಕಿಚ್ಚ ಸುದೀಪ್ ಅವರೇ ಸೀಸನ್ 12 ಅನ್ನು ನಿರೂಪಣೆ ಮಾಡುತ್ತಿದ್ದಾರೆ. ಕಲರ್ಸ್ ಕನ್ನಡ ಹಾಗೂ ಕಿಚ್ಚನ ಮಧ್ಯೆ ನಡೆದ ಮಾತುಕತೆ ಯಶಸ್ವಿಯಾಗಿದೆ.