ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ನೀಡುವ ಶಿಫಾರಸು ಪತ್ರಗಳ ಬಗ್ಗೆ ಶಾಸಕರು ಮತ್ತು ಸಚಿವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಶಾಸಕರ ಬಳಿ ನಾವು ಪತ್ರ ಪಡೆಯುತ್ತೇವೆ. ನೀವು ಪತ್ರ ನೀಡಿ ಎಂದಾಗ ಅಧಿಕಾರಿಗಳಿಗೆ ವರ್ಗಾವಣೆಗಾಗಿ ನಾವು ಪತ್ರ ನೀಡಿರುತ್ತೇವೆ ಅಷ್ಟೇ. ಹೀಗಾಗಿ ಅಧಿಕಾರಿಗಳ ವರ್ಗಾವಣೆಯ ಸಮಸ್ಯೆ ಇಲ್ಲ. ಈ ಪ್ರಕ್ರಿಯೆ ಸದಾ ನಡೆಯುತ್ತದೆ. ಈ ವಿಷಯದಲ್ಲಿ ಶಾಸಕರ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.
ರಾಜಕೀಯದಲ್ಲಿ, ಆರೋಪಗಳನ್ನು ಎದುರಿಸುವುದು ಸಾಮಾನ್ಯ. ಆದರೆ ಪ್ರತಿಯೊಬ್ಬ ಅಧಿಕಾರಿಯೂ 4 ವರ್ಷ ಸೇವೆ ಸಲ್ಲಿಸಬೇಕೆಂಬುದು ನಮ್ಮ ಆಶಯ. ಯಾವುದೇ ಅಧಿಕಾರಿಯನ್ನ ಒಂದೇ ವರ್ಷದಲ್ಲಿ ಬದಲಾವಣೆ ಮಾಡುವ ಪದ್ಧತಿ ನಮ್ಮಲ್ಲಿಲ್ಲ. ದೆಹಲಿಯಲ್ಲಿ ಅಧಿಕಾರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.