ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದುಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೈ ಬಲಪಡಿಸ್ತೀವಿ. ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುತ್ತೇನೆ. ಬಿಆರ್ ಪಾಟೀಲ್, ಬಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಯಾರೊಬ್ಬರು ಮಾಧ್ಯಮಗಳ ಮುಂದೆ ಹೋಗಬಾರದು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.