ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶೋಕಾಸ್ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ಅಧ್ಯಕ್ಷ , ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ.

ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಅವರು ಡಿಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಏಳಿಸಿತ್ತು. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶೋಕಾಸ್ ನೋಟಿಸ್ನೀಡಿದ್ದಾರೆ.

ನೋಟಿಸ್ ನಲ್ಲಿ ಇಕ್ಬಾಲ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಅಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಒಂದು ವಾರದಲ್ಲಿ ಸಮಜಾಯಿಸಿ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!