ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹತ್ವದ ಬೆಳವಣಿಗೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಕೌಶಲ್ (Siddharth Kaushal) ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಆಂಧ್ರಪ್ರದೇಶದ ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಕೌಶಲ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಡಿಜಿಪಿಗೆ ಕಳುಹಿಸಿದ್ದು, ಈ ನಿರ್ಧಾರವನ್ನು ತಾವೇ ತೆಗೆದುಕೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಕೌಶಲ್ ಈ ಹಿಂದೆ ಕಡಪ, ಕೃಷ್ಣ ಮತ್ತು ಪ್ರಕಾಶಂ ಜಿಲ್ಲೆಗಳ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಡಿಜಿಪಿ ಕಚೇರಿಯಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಇದೀಗ ವೈಯುಕ್ತಿಕ ಕಾರಣಗಳಿಂದಾಗಿ ತಮ್ಮ ಹುದ್ದೆ ತೊರೆದಿದ್ದಾರೆ. ಇದೇ ವೇಳೆ ರಾಜಕೀಯ ಒತ್ತಡದಿಂದಾಗಿ ರಾಜೀನಾಮೆ ನೀಡುತ್ತಿರುವ ಸುದ್ದಿಯನ್ನು ಅವರು ನಿರಾಕರಿಸಿದ್ದಾರೆ.