ಹೊಸದಿಗಂತ ಹಾವೇರಿ:
ಹೃದಯಾಘಾತಕ್ಕೆ 30 ವರ್ಷದ ಯುವಕನೋರ್ವ ಬಲಿಯಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅಂತರವಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂತರವಳ್ಳಿ ಗ್ರಾಮದ ರಮೇಶ ಹಳ್ಳಳ್ಳಿ (30) ಹೃದಯಾಘಾತದಿಂದ ಮೃತಪಟ್ಟ ಯುವಕ.
ರಮೇಶ ಜಮೀನಿನಲ್ಲಿ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಕುಳಿತಿದ್ದ. ಊಟದ ಮಧ್ಯೆಯೇ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.
ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.