ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಜೊತೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ನಟ ದರ್ಶನ್ ಆಷಾಡಮಾಸದ ಶುಕ್ರವಾರದಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತಪ್ಪದೆ ಭೇಟಿ ನೀಡುತ್ತಾರೆ. ಕಳೆದ ವರ್ಷ ಜೈಲಿನಲ್ಲಿದ್ದ ಕಾರಣಕ್ಕೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಾಗಲಿಲ್ಲ. ಇಂದು ಆಷಾಡಮಾಸದ ಎರಡನೇ ಶುಕ್ರವಾರದಂದು ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಅವರ ಜೊತೆಗೂಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಮಾಡಿದ್ದಾರೆ.
ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆ ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬರುತ್ತಿದ್ದಾರೆ.