ಹೊಸದಿಗಂತ ವರದಿ ಮಂಡ್ಯ :
ಸಿಎಂ ಬದಲಾವಣೆಕ್ಕೂ ನನಗೂ ಸಂಬಂಧ ಇಲ್ಲ. ಸಿಎಂ ಮುಂದುವರಿಯುತ್ತಾರೆ, ಅಥವಾ ಬೇರೆಯವರು ಆಗುತ್ತಾರೋ ಗೊತ್ತಿಲ. ಅದನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು. ಅವರೇ ತೀರ್ಮಾನ ಮಾಡಬೇಕು. ಇದಕ್ಕೆ ನಾನೇಕೆ ತಲೆ ಕೆಡಿಸಿಕೊಳ್ಳಲಿ. ಅದರ ಅವಶ್ಯಕತೆ ನನಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದೆ. ಇದಕ್ಕೆ ನಾನು ತಲೆ ಕೆಡಿಸಿಕೊಳ್ಳುವ ಅಗತ್ಯವೇನಿದೆ. ಅದೇನಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಿಖಿಲ್ ಪಕ್ಷ ಸಂಘಟನೆ ಮಾಡ್ತಿದ್ದಾರೆ :
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಮೈತ್ರಿಗೂ ಇದಕ್ಕೂ ಸಂಬಂಧವಿಲ್ಲ. ನಾವು 224 ಕ್ಷೇತ್ರಗಳಲ್ಲೂ ಜೆಡಿಎಸ್ ನಿಲ್ಲಲು ಸಾಧ್ಯವಿಲ್ಲ. ನಮಗೆ ಶಕ್ತಿ ಇರುವ ಕಡೆ ಸಂಘಟನೆ ಮಾಡುತ್ತಿದ್ದೇವೆ. ಚುನಾವಣೆ ಬಂದಾಗ ಕೇಂದ್ರ ನಾಯಕರ ಜೊತೆ ಹಾಗೂ ಕ್ಷೇತ್ರಗ ಹಂಚಿಕೆ ಬಗ್ಗೆ ಮಾತನಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.