ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ‘ಅಸ್ವಾಭಾವಿಕ ಸಾವು’ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್) ವೈ ಚಕ್ರಪಾಣಿ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಶುಕ್ರವಾರ ಶಿಫಾರಸು ಮಾಡಿದ್ದಾರೆ.
ಜೂನ್ 26 ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಒಂಬತ್ತು ವರ್ಷದ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವನ್ನಪ್ಪಿದ ಪ್ರಕರಣದ ಬಗ್ಗೆ ಇಲಾಖಾ ತನಿಖೆಗೆ ಈಶ್ವರ್ ಖಂಡ್ರೆ ಆದೇಶಿಸಿದ್ದರು.
ಘಟನೆಯ ತನಿಖೆಗಾಗಿ ರಚಿಸಲಾದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಎಪಿಸಿಸಿಎಫ್) ಕುಮಾರ್ ಪುಷ್ಕರ್ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ಸಲ್ಲಿಸಿದ ಪ್ರಾಥಮಿಕ ವರದಿಯನ್ನು ಆಧರಿಸಿ ಈಶ್ವರ್ ಖಂಡ್ರೆ ಅವರು ವೈ ಚಕ್ರಪಾಣಿ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದ್ದಾರೆ.