February 5, 2026
Thursday, February 5, 2026
spot_img

ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಂತು ಬಾಂಬ್ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಹಲಸೂರು ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.ಈ ಘಟನೆ ಜನವರಿ 30ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ ದೂರು ನೀಡಿದ್ದು, 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ.

ಜನವರಿ ಕೊನೆಯ ವಾರದಲ್ಲಿ ರಾಜಧಾನಿಯ ರಾಜ್ಯಪಾಲರ ಕಚೇರಿಗೇ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !