ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಹರಿಯಾಣದ ಫರಿದಾಬಾದ್ ಅಲ್ ಫಲಾಹ್ ವಿಶ್ವವಿದ್ಯಾಲಯದ ಅಧ್ಯಕ್ಷ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ದೆಹಲಿ ಪೊಲೀಸ್ ಅಪರಾಧ ವಿಭಾಗವು ಬಂಧಿಸಿದೆ.
ಯುಜಿಸಿಯ ದೂರಿನ ಮೇರೆಗೆ, ಅಪರಾಧ ವಿಭಾಗವು ಸಿದ್ದಿಕಿ ವಿರುದ್ಧ ವಂಚನೆ ಮತ್ತು ಸಂಬಂಧಿತ ಅಪರಾಧಗಳ ಆರೋಪ ಹೊರಿಸಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದೆ. ಬಂಧನದ ನಂತರ, ಸಿದ್ದಿಕಿ ಅವರನ್ನು ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿತು.
ದೆಹಲಿ ಕೆಂಪುಕೋಟೆ ಸಮೀಪ ನಡೆದ ಸ್ಫೋಟ ಪ್ರಕರಣದ ಪ್ರಮುಖ ಅಪರಾಧಿ ಡಾ. ಉಮರ್ ನಬಿ ಈ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದನು. ಅವರ ಇಬ್ಬರು ಸಹಚರರಾದ ಡಾ. ಮುಜಮ್ಮಿಲ್ ಶಕೀಲ್ ಮತ್ತು ಡಾ. ಶಾಹೀನ್ ಶಾಹಿದ್ ಕೂಡ ವೈಟ್-ಕಾಲರ್ ಭಯೋತ್ಪಾದಕ ಜಾಲದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.



