ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ.
ಬಂಗಾಳ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಪಶ್ಚಿಮ ಬಂಗಾಳದ ಎಲ್ಲಾ 294 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ.ಎಲ್ಲರು ಸಿದ್ಧತೆ ಆರಂಭಿಸುತ್ತೇವೆ ಎಂದರು.
ದೆಹಲಿಯ ರಾಜಾಜಿ ಮಾರ್ಗದಲ್ಲಿರುವ 10, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಪಕ್ಷದ ರಾಜ್ಯಾಧ್ಯಕ್ಷ ಸುಬಾಂಕರ್ ಸರ್ಕಾರ್, ಹಿರಿಯ ನಾಯಕರಾದ ಅಧೀರ್ ರಂಜನ್ ಚೌಧರಿ, ಸಂಸದ ಇಶಾ ಖಾನ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.



