March 23, 2026
Monday, March 23, 2026
spot_img

ನೇಪಾಳದಲ್ಲಿ ಕುಳಿತು ನೂರಾರು ಕೋಟಿ ವಂಚನೆ: ಮಂಗಳೂರು ಸೆನ್ ಕ್ರೈಂ ಪೊಲೀಸರಿಂದ 11 ಮಂದಿ ಬಂಧನ

ಹೊಸದಿಗಂತ ವರದಿ, ಮಂಗಳೂರು:

ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಯಾರು?
ಗುಜರಾತ್ ಬಾವಾನಗರ್ ಜಿಲ್ಲೆಯ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳ ಸರಂಜಿತ್ ಕೊಲ್ಲತ್ತಾ ನಿವಾಸಿ ಸೌಮಾತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಸಿಂಗಬುಮ್ ಜಿಲ್ಲೆಯ ಪುಪ್ಲ ಶಿವ ಕುಮಾರ್ ರಾವ್ (32), ಉತ್ತರ ಪ್ರದೇಶ ಮಾವೋ ಜಿಲ್ಲೆಯ ಗೌರವ್ ಪಾಂಡೆ (24), ಸುಲ್ತಾನ್‌ಪುರ್ ಜಿಲ್ಲೆಯ ಹರ್ಷ್ ಮಿಸ್ರಾ (22), ಜಾರ್ಖಂಡ್ ಡಿಯೋಗರ್ ಜಿಲ್ಲೆಯ ರಾಜೇಶ್ ಮಂಡನ್ (30), ಉತ್ತರ ಪ್ರದೇಶ ಲಕ್ನೋ ನಿವಾಸಿ ಮೊಹಮ್ಮದ್ ಆಕೀಬ್ ಅಲಿ (27), ಬಿಹಾರದ ನಳಂದ ಜಿಲ್ಲೆಯ ರಾಜೀವ್ ರಂಜನ್ ಕುಮಾರ್ (30), ಜಾರ್ಖಂಡ್ ಸಿಂಗಬುಮ್ ಜಿಲ್ಲೆಯ ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶ ಝಾನ್ಸಿ ಜಿಲ್ಲೆಯ ನೌಶಾದ್ ಅಲಿ (34), ರಾಜಸ್ತಾನ ಜೈಪುರದ ಓಂ ಪ್ರಕಾಶ್ ಯಾದವ್ (37) ಬಂಧಿತರು.

ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 5 ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್‌ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿವೆ. ಈ ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4 ಸಾವಿರದ 580 ಕ್ಕೂ ಹೆಚ್ಚು ಎನ್‌ಸಿಆರ್‌ಪಿ ಪೋರ್ಟಲ್‌ನಲ್ಲಿ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 1 ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿರುವುದು ಕಂಡುಬಂದಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !