ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ ಓಮನ್ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ಶಂತನು ಶೆಟ್ಟಿಗಾರ್ 49 ಕೋಟಿ ( (20 ಮಿಲಿಯನ್ ದಿರಮ್ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ.
ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಓಮನ್ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದು, ಜನವರಿ 20ರಂದು ಬಿಗ್ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಈ ಲಾಟರಿ ಫೆ.3ರಂದು ಬಿಗ್ ಟಿಕೆಟ್ ಡ್ರಾ ಆಗಿದ್ದು, ಶಂತನು ಅವರಿಗೆ ಅದೃಷ್ಟ ಖುಲಾಯಿಸಿದೆ.
ತನ್ನ ಸ್ನೇಹಿತರೊಬ್ಬರೊಂದಿಗೆ ಸೇರಿಕೊಂಡು ಶಂತನು ಜಂಟಿಯಾಗಿ ಟಿಕೆಟ್ ಖರೀದಿಸಿದ್ದರು. ಹೀಗಾಗಿ ಒಟ್ಟು 49 ಕೋಟಿ ರೂಪಾಯಿನಲ್ಲಿ ಇಬ್ಬರೂ ತಲಾ 24.5 ಕೋಟಿ ರೂ. ಹಂಚಿಕೊಳ್ಳಲು ನಿರ್ಧರಿಸಿದ್ದಾರೆ.



