ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ (WPL 2026) ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡಗಳು ಕಾದಾಟ ನಡೆಸುತ್ತಿವೆ.
ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟ್ ಮಾಡಲಿದೆ.
ಸ್ಮೃತಿ ಮಂಧಾನಾ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡ, 2024ರಲ್ಲಿ ಮೊದಲ ಬಾರಿ ಪ್ರಶಸ್ತಿಯನ್ನು ಗೆದ್ದಿತ್ತು. ಇದೀಗ ಎರಡನೇ ಕಪ್ ಗೆಲ್ಲುವ ಗುರಿಯನ್ನು ಹೊಂದಿದೆ.
ಜೆಮಿಮಾ ರೊಡ್ರಿಗಸ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದನ್ನೂ ಸೇರಿಸಿ ನಾಲ್ಕು ಬಾರಿ ಫೈನಲ್‌ಗೆ ಪ್ರವೇಶ ಮಾಡಿದೆ. ಆದರೆ, ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನಾ (ನಾಯಕಿ), ಜಾರ್ಜಿಯಾ ವಾಲ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ಮದಿನ್ ಡಿ ಕ್ಲರ್ಕ್, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಸಯಾಲಿ ಸಾತ್ಘರೆ, ಶ್ರೇಯಾಂಕ ಪಾಟೀಲ್, ಲಾರೆನ್ ಬೆಲ್
ಡೆಲ್ಲಿ ಕ್ಯಾಪಿಟಲ್ಸ್: ಲಿಝೆಲ್ ಲೀ (ವಿಕೆಟ್ ಕೀಪರ್), ಶಫಾಲಿ ವರ್ಮಾ, ಲಾರಾ ವೋಲ್ವಾರ್ಡ್, ಜೆಮಿಮಾ ರೊಡ್ರಿಗಸ್ (ನಾಯಕ), ಮಾರಿಜಾನ್ ಕಾಪ್, ಚಿನೆಲ್ಲಿ ಹೆನ್ರಿ, ನಿಕಿ ಪ್ರಸಾದ್, ಸ್ನೇಹಾ ರಾಣಾ, ಮಿನ್ನು ಮಣಿ, ಶ್ರೀಚರಣಿ, ನಂದಿನಿ ಶರ್ಮಾ



