September 19, 2026
Saturday, September 19, 2026
spot_img

ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಮ್ಯಾಚ್ ಬಾಯ್ಕಾಟ್: ಪಾಕ್ ನಿರ್ಧಾರಕ್ಕೆ ಥ್ಯಾಂಕ್ಯೂ ಎಂದ ಬಾಂಗ್ಲಾದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯವನ್ನುಬಹಿಷ್ಕರಿಸಿದ ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಬೆಂಬಲ ಸೂಚಿಸಿದೆ.

ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಬೇಕಿದ್ದ ಭಾರತ-ಪಾಕ್ ಪಂದ್ಯವನ್ನು ಆಡುವುದಿಲ್ಲ ಎಂದು ಪಾಕಿಸ್ತಾನ ಘೋಷಿಸಿದೆ. ಪಾಕಿಸ್ತಾನದ ಈ ನಡೆಯನ್ನು ಬಾಂಗ್ಲಾದೇಶ ಸ್ವಾಗತಿಸಿದ್ದು, ಕ್ರೀಡಾ ಸಲಹೆಗಾರ ಆಸಿಫ್ ನಸ್ರುಲ್ ಅವರು ಪಾಕಿಸ್ತಾನಕ್ಕೆ ಧನ್ಯವಾದ ತಿಳಿಸಿದ್ದಾರೆ.

ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಕ್ರೀಡಾ ಸಚಿವರಿಗೆ ಸಮಾನವಾದ ಹುದ್ದೆಯಲ್ಲಿರುವ ಆಸಿಫ್ ನಸ್ರುಲ್, ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಥ್ಯಾಂಕ್ಯೂ ಪಾಕಿಸ್ತಾನ್. ಬಾಂಗ್ಲಾದೇಶವನ್ನು ವಿಶ್ವಕಪ್‌ನಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಭಾರತ ವಿರುದ್ಧದ ಮ್ಯಾಚ್ ಬಾಯ್ಕಾಟ್ ಮಾಡುವುದಾಗಿ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಹೇಳಿದ್ದಾರೆ. ಈ ನಿರ್ಧಾರಕ್ಕೆ ಬಾಂಗ್ಲಾದೇಶ ಋಣಿಯಾಗಿದೆ’ ಎಂದು ಪೋಸ್ಟ್ ಮಾಡಿದ್ದಾರೆ.

ಐಪಿಎಲ್‌ನಿಂದ ಮುಸ್ತಾಫಿಜುರ್‌ ರಹ್ಮಾನ್‌ರನ್ನು ಹೊರಗಿಟ್ಟಿದ್ದಕ್ಕೆ ಬಾಂಗ್ಲಾ ತಂಡ ಟಿ20 ವಿಶ್ವಕಪ್‌ ಆಡಲ್ಲ ಎಂದು ತಗಾದೆ ತೆಗೆಯಿತು. ಬಾಂಗ್ಲಾದೇಶ ಭದ್ರತೆಯ ಕಾರಣ ನೀಡಿತಾದರೂ, ಬಾಂಗ್ಲಾಗೆ ಬೆಂಬಲವಾಗಿ ನಿಂತ ಪಾಕ್ ಯಾವುದೇ ಕಾರಣ ನೀಡದೆ ಭಾರತ ವಿರುದ್ಧ ಆಡಲ್ಲ ಎಂದು ಘೋಷಿಸಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !