ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಕಳೆದ 17 ದಿನಗಳಲ್ಲಿ 19 ಬಾರಿ ಮೇಘಸ್ಫೋಟ ಸಂಭವಿಸಿದ್ದು, ಒಟ್ಟು 82 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಬದರೀನಾಥ ಮಾರ್ಗವನ್ನು ಕೂಡ ಬಂದ್ ಮಾಡಲಾಗಿದೆ.
ಜೂನ್ 20 ರಿಂದ ಜುಲೈ 6 ರವರೆಗೆ ಹಿಮಾಚಲ ಪ್ರದೇಶದಲ್ಲಿ 19 ಮೇಘಸ್ಫೋಟಗಳು, 23 ಪ್ರವಾಹ ಅವಘಡಗಳು, 19 ಭೂಕುಸಿತಗಳು ಸಂಭವಿಸಿವೆ. ಒಟ್ಟು 269 ರಸ್ತೆಗಳ ಸಂಪರ್ಕ ಕಡಿತಗೊಂಡಿವೆ.
ದೇಶದ ಹಲವೆಡೆ ಮುಂಗಾರು ಅಬ್ಬರ ಜೋರಾಗಿದೆ. ಪರಿಣಾಮವಾಗಿ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಮಧ್ಯಪ್ರದೇಶದ ಶಹದೋಲ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 4 ಇಂಚು ಮಳೆಯಾಗಿದೆ. ರಾತ್ರಿಯಿಡೀ 3,000 ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡವು.