ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ ವಾತವಾರಣವಿದ್ದು ಈ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಸೂಚನೆ ನೀಡಿದಾರೆ.
ಜಿಲ್ಲೆಯ ಮುಳಯ್ಯನಗಿರಿ ಪ್ರದೇಶ ಮೂಡಿಗೆರೆ ತಾಲೂಕಿನ ಹಲವು ಪ್ರವಾಸಿ ತಾಣಗಳಲ್ಲಿ ಆಗಾಗ ದಟ್ಟ ಮಂಜು ಆವರಿಸುತ್ತಿದ್ದು ಮಂಜಿನಿಂದ ರಸ್ತೆ ಸರಿಯಾಗಿ ಕಾಣದೆ ಸಮಸ್ಯೆಗಳಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಭಾಗದಲ್ಲಿ ಇಂದು ಮುಂಜಾನೆಯಿಂದಲೂ ಗಾಳಿ ಮಳೆಯಾಗುತಿದ್ದು ಜನ ಜೀವನ ಅಸ್ತ ವ್ಯಸ್ತಗೊಂಡಿದೆ.