ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಟ ಮಾಡ್ತಾರೆ ಎಂದು ಆರೋಪಿಸಿ ಒಂದೇ ಕುಟುಂಬದ ಐವರನ್ನು ಜೀವಂತವಾಗಿ ಸುಟ್ಟು ಕೊಂದುಹಾಕಿರುವ ಆಘಾತಕಾರಿ ಘಟನೆ ಬಿಹಾರದ ಪೂರ್ಣಿಯಾದಲ್ಲಿ ನಡೆದಿದೆ.
ಮೃತರನ್ನು ಬಾಬು ಲಾಲ್ ಒರಾನ್, ಸೀತಾ ದೇವಿ, ಮಂಜೀತ್ ಒರಾನ್, ರಾನಿಯಾ ದೇವಿ ಮತ್ತು ತಪ್ಟೋ ಮೊಸಾಮತ್ ಎಂದು ಗುರುತಿಸಲಾಗಿದೆ. ಗ್ರಾಮಸ್ಥರಿಂದಲೇ ಈ ಕೃತ್ಯ ನಡೆದಿದೆ. ಪುತ್ರನ ಸಮ್ಮುಖದಲ್ಲೇ ಐವರನ್ನು ಹತ್ಯೆ ಮಾಡಲಾಗಿದೆ. ಗ್ರಾಮದ 250ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಿಹಾರದ ಪೂರ್ಣಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ತೇತ್ಗಾಮಾ ಗ್ರಾಮದಲ್ಲಿ ವಾಮಾಚಾರದ ಆರೋಪದ ಮೇಲೆ ಒಂದೇ ಕುಟುಂಬದ ಐವರನ್ನು ಕ್ರೂರವಾಗಿ ಥಳಿಸಿ, ನಂತರ ಜೀವಂತವಾಗಿ ಸುಟ್ಟುಹಾಕಲಾಗಿದೆ. ಈ ಭೀಕರ ಕೊಲೆ ಸಮುದಾಯದಲ್ಲಿ ಆಘಾತ ಉಂಟುಮಾಡಿದೆ. ಎಲ್ಲಾ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.