ಹೊಸದಿಗಂತ ವರದಿ ಮಡಿಕೇರಿ:
ಕಾಡಾನೆ ದಾಳಿಗೆ ಮಾನಸಿಕ ಅಸ್ವಸ್ಥನೊಬ್ಬ ಸಾವಿಗೀಡಾದ ಘಟನೆ ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಮಾಯಮುಡಿ ಗ್ರಾಮ ಪಂಚಾಯಿತಿಯ ಪೊನ್ನಪ್ಪಸಂತೆಯ ಮುಖ್ಯರಸ್ತೆಯಲ್ಲಿ ಬೆಳಗ್ಗೆ 7ಗಂಟೆಗೆ ಸೈಕಲ್’ನಲ್ಲಿ ತೆರಳುತ್ತಿದ್ದ ಅಜಯ್ ಎಂಬವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅದೃಷ್ಟವಶಾತ್ ಅಜಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ಅದೇ ಸಂದರ್ಭ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾನಸಿಕ ಅಸ್ವಸ್ಥನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಆನೆಯ ತುಳಿತಕ್ಕೆ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.