ರಾಯ್‌ಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದೋರ್‌ಗೆ ವಾಪಸ್, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

51 ಪ್ರಯಾಣಿಕರನ್ನು ಹೊತ್ತ ಇಂಡಿಗೋ ಇಂದೋರ್-ರಾಯ್‌ಪುರ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದಾಗಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿದೆ.

ಇಂದೋರ್‌ನಿಂದ ಹೊರಟು ಸುಮಾರು 60 ನಾಟಿಕಲ್ ಮೈಲುಗಳಷ್ಟು ದೂರ ಕ್ರಮಿಸಿದ ನಂತರ, ಇಂಡಿಗೊ ಏರ್‌ಲೈನ್ಸ್ ವಿಮಾನ ಸಂಖ್ಯೆ 6E-7295ರಲ್ಲಿ ತಾಂತ್ರಿಕ ದೋಷ ಇರುವುದು ಪೈಲಟ್‌ ಅವರ ಗಮನಕ್ಕೆ ಬಂದಿದೆ.

ಮಂಗಳವಾರ ಬೆಳಿಗ್ಗೆ 6.35ರ ಸುಮಾರಿಗೆ ಇಂದೋರ್ ವಿಮಾನ ನಿಲ್ದಾಣದಿಂದ ವಿಮಾನ ಹೊರಟಿತು. ಇದಾದ ಕೆಲವು ನಿಮಿಷಗಳಲ್ಲೇ ಪೈಲಟ್ ವಾಯು ಸಂಚಾರ ನಿಯಂತ್ರಣ ಘಟಕಕ್ಕೆ ಮಾಹಿತಿ ನೀಡಿದರು. ತಾಂತ್ರಿಕ ಕಾರಣಗಳಿಂದ ವಿಮಾನ ವಾಪಸ್‌ ಆಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!