ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ದಿನಗಳ ಭಾಗಿ ಇರುವಂತೆಯೇ ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35 ರಷ್ಟು ಮೀಸಲಾತಿಯನ್ನು ಸಿಎಂ ನಿತೀಶ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ. ಬಿಹಾರದ ಖಾಯಂ ನಿವಾಸಿಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿತೀಶ್ ಕುಮಾರ್, ರಾಜ್ಯದ ಸರ್ಕಾರಿ ಸೇವೆಗಳಲ್ಲಿ ನೇರ ನೇಮಕಾತಿಯಾದ ಎಲ್ಲಾ ವರ್ಗದ, ಹಂತದ ಬಿಹಾರದ ಮೂಲ ನಿವಾಸಿಗಳಾದ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಶೇ. 35 ರಷ್ಟು ಮೀಸಲಾತಿ ಒದಗಿಸಲಾಗುವುದು. ಈ ನಿರ್ಧಾರವು ಆಡಳಿತ ಮತ್ತು ಆಡಳಿತದಲ್ಲಿ ಹೆಚ್ಚಿನ ಮಹಿಳೆಯರ ಭಾಗವಹಿಸುವಿಕೆಯತ್ತ ಒಂದು ಪ್ರಮುಖವಾದ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.
ಪಾಟ್ನಾದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಈ ನಿರ್ಧಾರವು ಮಹಿಳಾ ಸಬಲೀಕರಣಕ್ಕೆ ರಾಜ್ಯದ ಬದ್ಧತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲಾ ಇಲಾಖೆಗಳಾದ್ಯಂತ ಹೆಚ್ಚಿನ ಮಹಿಳೆಯರನ್ನು ತರುವ ಗುರಿಯನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.