ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಎಫ್​ಐಆರ್: ಆರ್​ಸಿಬಿ ವೇಗಿಗೆ ಶುರುವಾಗಿದೆ ಬಂಧನದ ಭೀತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ವೇಗಿ ಯಶ್ ದಯಾಳ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಯುವತಿಯೊಬ್ಬಳು ಮಾಡಿದ ಗಂಭೀರ ಆರೋಪದ ಮೇಲೆ ಬಿಎನ್​​ಎಸ್ ಸೆಕ್ಷನ್ 69ರ ಅಡಿಯಲ್ಲಿ ಘಾಜಿಯಾಬಾದ್​ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಕಚೇರಿಗೂ ಸಂತ್ರಸ್ತೆ ಪತ್ರದ ಮೂಲಕ ದೂರು ನೀಡಿದ್ದಳು. ಸಿಎಂ ಕಚೇರಿ ಸೂಚನೆ ಮೇರೆಗೆ ಪೊಲೀಸರು ದಯಾಳ್ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ದಯಾಳ್ ಅವರ ಮಾಜಿ ಪ್ರಿಯತಮೆ ಎನ್ನಲಾದ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾರೆ. ದಯಾಳ್ ಮತ್ತು ನಾನು ಕಳೆದ ಐದು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವು. ಈ ಅವಧಿಯಲ್ಲಿ ದಯಾಳ್, ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಈಗ ದೂರ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

ಈಗಾಗಲೇ ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದ ಪೊಲೀಸರು, ಇದೀಗ ದಯಾಳ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಇದರಿಂದ ದಯಾಳ್​​ಗೆ ಬಂಧನದ ಭೀತಿ ಎದುರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!