ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿಮಾನ ದುರಂತ ಸಂಬಂಧ ಇಂದು ಎಎಐಬಿ (AAIB) 2 ಪುಟಗಳ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ.
ಜೂ.12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಪರಿಣಾಮ ಸ್ಥಳೀಯರು, ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆರವುಗೊಳಿಸುವ ವೇಳೆ ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ವಶಪಡಿಸಿಕೊಂಡಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ಆರಂಭಿಸಿತ್ತು.
ಸದ್ಯ ವಿಮಾನ ದುರಂತಕ್ಕೆ ಕಾರಣ ಏನು ಎಂಬುವುದರ ವರದಿ ಸಲ್ಲಿಸಿದೆ. ವಿಮಾನ ಅಪಘಾತಕ್ಕೆ ಕಾರಣ ಏನೆಂದು ಈ ವರದಿಯಲ್ಲಿ ಬಹಿರಂಗವಾಗುವ ಸಾಧ್ಯತೆಯಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವ ಸಾಧ್ಯತೆಯಿದೆ.