ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಆಲಿಯಾ ಭಟ್ ಮಾಜಿ ಆಪ್ತ ಸಹಾಯಕಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ ಆರೋಪಿ. ಭಟ್ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ ವಂಚಿಸಿದ ಆರೋಪ ವೇದಿಕಾ ಮೇಲೆ ಹೊರಿಸಲಾಗಿದೆ. 2022ರ ಮೇ ಮತ್ತು 2024ರ ಆಗಸ್ಟ್ ತಿಂಗಳ ನಡುವೆ ಈ ವಂಚನೆ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಆಲಿಯಾ ಭಟ್ ಅವರ ತಾಯಿ, ನಟಿ-ನಿರ್ದೇಶಕಿ ಸೋನಿ ರಜ್ದಾನ್ ಕಳೆದ ಜನವರಿ 23ರಂದು ಜುಹು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ದೂರನ್ನಾಧರಿಸಿ ಕ್ರಿಮಿನಲ್ ಮತ್ತು ವಂಚನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವೇದಿಕಾಗಾಗಿ ಹುಡುಕಾಟ ನಡೆಸಿದ್ದರು.