ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ಪ್ರಿಯಕರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಅಪ್ರಾಪ್ತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಯುವಕ ದೇವಪ್ಪ ಆಲಿಯಾಸ್ ಮುತ್ತು ಹಾಗೂ 17 ವರ್ಷದ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೇ ಇವರಿಬ್ಬರ ಪ್ರೀತಿಯನ್ನು ಪೋಷಕರು ಒಪ್ಪಿರಲಿಲ್ಲ. ಅವರ ಪ್ರೀತಿಯನ್ನು ನಿರಾಕರಿಸಿದ ಕಾರಣ ಮನನೊಂದು ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.