ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಮನಗರದಲ್ಲಿ ಇಂದು ಭೀಕರ ಕೊಲೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ನುಗ್ಗಿ 14 ವರ್ಷದ ಬಾಲಕಿಯನ್ನಹತ್ಯೆ ಮಾಡಿದ್ದಾರೆ.
ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ ಈ ಕೃತ್ಯ ನಡೆದಿದೆ. ಅರುಣ (14) ಎನ್ನುವ ಬಾಲಕಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ತಂದೆ ತಾಯಿ ಕೆಲಸಕ್ಕೆ ಹೋಗಿದ್ದಾಗ ಬಾಲಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಶಾಲೆಗೆ ಹೋಗದೆ ಮನೆಯಲ್ಲಿ ಇದ್ದ ಬಾಲಕಿಯ ಮೇಲೆ ಹಂತಕರು ಹಲ್ಲೆ ಮಾಡಿದ್ದಾರೆ. ಆದರೆ ಒಂದು ಭೀಕರ ಕೊಲೆಗೆ ಕಾರಣ ತಿಳಿದು ಬಂದಿಲ್ಲ.