ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಹೊಸ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಭರ್ಜರಿ ಮುಂಬಡ್ತಿ ಪಡೆದುಕೊಂಡಿದ್ದಾರೆ. ಗಿಲ್ ಆರನೇ ಸ್ಥಾನಕ್ಕೆ ಬಂದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಂತರ 21 ನೇ ಸ್ಥಾನದಲ್ಲಿದ್ದ ಶುಭ್ಮನ್ ಗಿಲ್ ಇದೀಗ ಎರಡನೇ ಟೆಸ್ಟ್ ನಂತರ ಆರನೇ ಸ್ಥಾನಕ್ಕೆ ತಲುಪಿದ್ದಾರೆ. ಉಳಿದಂತೆ ಇಂಗ್ಲೆಂಡ್ ತಂಡದ ಉಪನಾಯಕ ಹ್ಯಾರಿ ಬ್ರೂಕ್ ನಂಬರ್ 1 ಸ್ಥಾನವನ್ನು ಅಲಂಕರಿಸಿಕೊಂಡಿದ್ದರೆ, ಜೋ ರೂಟ್ ನಂಬರ್ 1 ರಿಂದ ನಂಬರ್ 2 ಸ್ಥಾನಕ್ಕೆ ಕುಸಿದಿದ್ದಾರೆ.
ಹ್ಯಾರಿ ಬ್ರೂಕ್ ಮೊದಲ ಟೆಸ್ಟ್ನಲ್ಲಿ 99 ರನ್ ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ ಅದ್ಭುತ ಶತಕ ಬಾರಿಸಿದ್ದರು. ಹೀಗಾಗಿ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದಾರೆ. ಇತ್ತ ಎರಡೂ ಟೆಸ್ಟ್ಗಳಲ್ಲಿ ವಿಫಲರಾದ ಜೋ ರೂಟ್, ನಂಬರ್ 1 ಸ್ಥಾನವನ್ನು ಕಾಯ್ದುಕೊಳ್ಳಲು ಸಾಧ್ಯವಾಗದೆ ನಂ.2 ಸ್ಥಾನಕ್ಕೆ ಕುಸಿದಿದ್ದಾರೆ.
ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದರೆ, ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಸ್ಟೀವ್ ಸ್ಮಿತ್ ಐದನೇ ಸ್ಥಾನದಲ್ಲಿದ್ದಾರೆ. ಟೆಂಬಾ ಬವುಮಾ 7 ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಿಷಭ್ ಪಂತ್ ಒಂದು ಸ್ಥಾನ ಕುಸಿದು 8 ನೇ ಸ್ಥಾನಕ್ಕೆ ಇಳಿದಿದ್ದಾರೆ.