ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ನಟ ಶ್ರೀನಗರ ಕಿಟ್ಟಿ ಡಿಫರೆಂಟ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ರವಿ ಬೆಳಗೆರೆ ( ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ `ವೇಷಗಳು’ ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಚಲನಚಿತ್ರವೊಂದು ತಯಾರಾಗುತ್ತಿದೆ. ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜು.8ರ ಮಂಗಳವಾರ ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬ. ಅದೇದಿನ ʻವೇಷಗಳುʼ ಸಿನಿಮಾದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಇನ್ನೂ ರಿಲೀಸ್ ಆಗಿರೋ ಟೀಸರ್ನಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜೀವನ ಶೈಲಿಯ ಬಗ್ಗೆ ಹೇಳಲಾಗುತ್ತಿದೆ. ಇಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಈಗಾಗಲೇ ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಜೋಗತಿಯರ ನಡೆ, ನುಡಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ಧತೆ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿ ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ.