ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದ ರಾಜ್ಯ ಸರಕಾರಕ್ಕೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ದಸರಾ ಏರ್ ಶೋಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರನ್ನೊಳಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ವಿವಿಧ ವಿಚಾರಗಳ ಕುರಿತಂತೆ ಚರ್ಚಿಸಲಾಯಿತು.
ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆಯೂ ಮನವಿ ಮಾಡಲಾಯಿತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ.